ಜನವಿರೋಧಿ ಮತ್ತು ಅಭಿವೃದ್ಧಿ ವಿರೋಧಿ ಬಜೆಟ್ – ಟಿ.ಎಂ.ಶಹೀದ್ ತೆಕ್ಕಿಲ್ ಟೀಕೆ…
ಸುಳ್ಯ: ಕನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್ ಯಾವುದೇ ಚಿಂತನೆ ಇಲ್ಲದ, ಸಂಘ ಪರಿವಾರದ ಕಪಿಮುಷ್ಠಿಯಲ್ಲಿ ಮಂಡಿಸಿದ ಜನವಿರೋಧಿ ಮತ್ತು ಅಭಿವೃದ್ಧಿ ವಿರೋಧಿ ಬಜೆಟ್ ಆಗಿದೆ ಎಂದು ಕೆಪಿಸಿಸಿ ಯ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಟೀಕಿಸಿದ್ದಾರೆ.
ರಾಜ್ಯದಲ್ಲಿ ಶೇ.15 ರಷ್ಟು ಸಮುದಾಯವನ್ನು ಹೊಂದಿರುವ ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಯಾವುದೇ ಯೋಜನೆ ಇಲ್ಲ. ಯುವಕ-ಯುವತಿಯರಿಗಾಗಿ ಹೊಸ ಉದ್ಯೋಗವನ್ನು ಸೃಷ್ಠಿಸುವ ಯೋಜನೆಗಳ ಪ್ರಸ್ತಾಪವಿರುವುದಿಲ್ಲ. ದ.ಕ. ಜಿಲ್ಲೆಗೆ ಯಾವುದೇ ವಿಶೇಷ ಪ್ಯಾಕೇಜ್ ಆಗಲಿ, ಅನುದಾನವಾಗಲಿ ಬಜೆಟ್‌ನಲ್ಲಿ ತೋರಿಸಿರುವುದಿಲ್ಲ. ಒಟ್ಟಿನಲ್ಲಿ ಇದು ಜನವಿರೋಧಿ ಬಜೆಟ್ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.