ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ವಿಟಿಯು ವಾರ್ಷಿಕ ಪರೀಕ್ಷೆಗಳಲ್ಲಿ 3 ರ‍್ಯಾಂಕ್…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2020-21ನೇ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ 2 ರ‍್ಯಾಂಕ್ ಪಡೆದುಕೊಂಡಿದ್ದಾರೆ.
ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ರಂಜನ್.ಎಂ ಮೂರನೇ ರ‍್ಯಾಂಕ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಕೃತಿಕಾ.ಕೆ ಎಂಟನೇ ರ‍್ಯಾಂಕ್ ಗಳಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.

Sponsors

Related Articles

Back to top button