ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳಾ ತ್ರೋಬಾಲ್ ಕ್ರೀಡಾಕೂಟ…

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯೆನೆಪೋಯ ಕಾಲೇಜು ತೋಡಾರು, ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳಾ ತ್ರೋಬಾಲ್ ಪಂದ್ಯಾಟ ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಫಿ ಮಾ. 3 ರಂದು ಮೂಡುಬಿದಿರೆಯ ಯೆನೆಪೋಯ ಕಾಲೇಜಿನ ಸುಸಜ್ಜಿತ ಹೊರ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಡಾ. ಚಂದ್ರಶೇಖರ್. ಪ್ರೊಫೆಸರ್ ಮತ್ತು ಸೈಂಟಿಸ್ಟ್ ಸಲಹೆಗಾರ ಯೆನೆಪೋಯ ಯೂನಿವರ್ಸಿಟಿ ಇವರು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಯೆನೆಪೋಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗುರುಪ್ರಸಾದ್, ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಬಿ ಶಾಹಿದ್, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ. ಲೋಕೇಶ್ ಉಪಸ್ಥಿತರಿದ್ದರು. ಹಸ್ನಾ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ| ರಾಧಾಕೃಷ್ಣ ಹೆಚ್. ಬಿ, ದೈಹಿಕ ಶಿಕ್ಷಣ ನಿರ್ದೇಶಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಇವರು ಆಗಮಿಸಿದ್ಧರು. ಯೆನೆಪೋಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗುರುಪ್ರಸಾದ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಪಂದ್ಯಾಟದಲ್ಲಿ ವಿಜೇತರಾದ ತಂಡಗಳಿಗೆ ಪ್ರಶಸ್ತಿ ಫಲಕ ನೀಡಲಾಯಿತು. ಈ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ಸತತ ಹದಿನಾರು ವರ್ಷಗಳಿಂದ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವೇಕಾನಂದ ಕಾಲೇಜು ಪುತ್ತೂರು ದ್ವಿತೀಯ ಸ್ಥಾನ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ ಸ್ಟ್ರೀಟ್ ಮಂಗಳೂರು ತೃತೀಯ ಮತ್ತು ಚತುರ್ಥ ಸ್ಥಾನವನ್ನು ಎಮ್ ಎಸ್ ಆರ್ ಎಸ್ ಕಾಲೇಜು ಶಿರ್ವ ಪಡೆದುಕೊಂಡಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಪಾಂಡು ನಾಯ್ಕ್, ಮುಖ್ಯಸ್ಥರು ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ , ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಶ್ರೀ ಲೋಕೇಶ್ ದೈಹಿಕ ಶಿಕ್ಷಣ ನಿರ್ದೇಶಕರು ಯೆನೆಪೋಯ ಕಾಲೇಜು ಮೂಡಬಿದಿರೆ ಉಪಸ್ಥಿತರಿದ್ದರು. ನವೀನ್ ಈ ಕಾರ್ಯಕ್ರಮ ನಿರೂಪಿಸಿದರು.

433a04a0 9154 4665 8d61 Bb6309d98abf 300x225

Related Articles