ಪುತ್ತೂರು ದಸರಾ ಮಹೋತ್ಸವ- ನವದುರ್ಗೆಯರ ಮೆರವಣಿಗೆ…..
ಪುತ್ತೂರು: ಇಲ್ಲಿನ ನವದುರ್ಗಾರಾಧನಾ ಸಮಿತಿ ವತಿಯಿಂದ ಸಂಪ್ಯ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆಯಲಿರುವ ದಸರಾ ಮಹೋತ್ಸವದಲ್ಲಿ ಪ್ರತಿಷ್ಠಾಪಿಸಲ್ಪಡುವ ನವದುರ್ಗೆಯರ ಮೆರವಣಿಗೆಗೆ ಭಾನುವಾರ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಚಾಲನೆ ನೀಡಲಾಯಿತು.
ಸಂಪ್ಯ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಇಂದಿನಿಂದ 9 ದಿನಗಳ ಕಾಲ ನಡೆಯುವ ಪುತ್ತೂರು ದಸರಾ ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲ್ಪಡುವ ಗಣಪತಿ, ಶಾರದೆ ಸಹಿತ ನವದುರ್ಗೆಯರ ಮೆರವಣಿಗೆಗೆ ನಡೆಲಾಯಿತು. ಕ್ಷೇತ್ರ ಕರಿಂಜೆಯ ಮುಕ್ತಾನಂದ ಸ್ವಾಮೀಜಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮೆರವಣಿಗೆ ಪುತ್ತೂರು ನಗರದ ಮುಖ್ಯ ರಸ್ತೆಯಿಂದ ಸಾಗಿ ಸಂಪ್ಯ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರವನ್ನು ತಲುಪಿ ಅಲ್ಲಿ ನವದುರ್ಗೆಯರ ಪ್ರತಿಷ್ಠಾಪನಾ ಕಾರ್ಯ ನಡೆಸಲಾಯಿತು.
ಪುತ್ತೂರು ನವದುರ್ಗಾರಾಧನಾ ಸಮಿತಿ ಸಂಚಾಲಕರಾದ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ, ಪ್ರಧಾನ ಕಾರ್ಯದರ್ಶಿ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ, ಸದಸ್ಯ ಜಯಂತ ರೈ ಕಂಬಳತ್ತಡ್ಡ, ಪ್ರಚಾರ ಸಮಿತಿ ಅಧ್ಯಕ್ಷ ಲೋಕೇಶ್ ಬನ್ನೂರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.