ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು- ಉಚಿತ ಲ್ಯಾಪ್‍ಟಾಪ್ ವಿತರಣೆ…
ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಉಚಿತವಾಗಿ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿವೇಕಾನಂದ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಮಾತನಾಡಿ ಪ್ರಸಕ್ತ ಸನ್ನಿವೇಶಕ್ಕೆ ತಕ್ಕಂತೆ ವಿದ್ಯಾರ್ಥಿಗಳೂ ಅಧ್ಯಾಪಕರೂ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕು. ಡಿಜಿಟಲ್ ಯುಗದಲ್ಲಿ ನೂತನ ತಂತ್ರಜ್ಞಾನದ ತಿಳುವಳಿಕೆ ಮತ್ತು ಬಳಕೆ ಅತೀ ಆವಶ್ಯಕ ಎಂದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ಸಮಾಜದಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಎರಡೂ ಇದೆ ಇದರಲ್ಲಿ ಸೂಕ್ತವಾದದ್ದನ್ನು ಆರಿಸುವ ಜಾಣ್ಮೆ ನಮ್ಮಲ್ಲಿರಬೇಕು. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯನ್ನು ಇನ್ನೂ ಹೆಚ್ಚಿಸುವುದಕ್ಕಾಗಿ ಲ್ಯಾಪ್‍ಟಾಪ್‍ಗಳು ಸಹಕಾರಿಯಾಗಲಿವೆ ಎಂದು ನುಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿ, ವಿದ್ಯಾರ್ಥಿಗಳನ್ನು ಉತ್ತಮ ವಿದ್ಯಾವಂತರನ್ನಾಗಿಸಿ ಸಚ್ಚಾರಿತ್ರ್ಯವಂತ ಪ್ರಜೆಗಳನ್ನಾಗಿಸುವುದಕ್ಕೆ ಅಗತ್ಯವಾದ ಎಲ್ಲಾ ನೆರವನ್ನು ನೀಡುವುದಕ್ಕೆ ಕಾಲೇಜು ಬದ್ಧವಾಗಿದೆ. ವಿವಿಧ ಸವಲತ್ತುಗಳನ್ನು ಬಳಸಿಕೊಂಡು ಉತ್ತಮರಾಗುವುದರ ಜತೆಗೆ ಸಮಾಜದ ಉನ್ನತಿಗಾಗಿ ಶ್ರಮಿಸಬೇಕು ಎಂದರು.
ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಕೆ. ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್ ಎಸ್ ಅಯ್ಯರ್ ಸ್ವಾಗತಿಸಿ, ಪ್ರೊ.ಆಶ್ಲೆ.ಡಿ.ಸೋಜ ವಂದಿಸಿದರು. ಪ್ರೊ. ರೇಶ್ಮ ಪೈ ಕಾರ್ಯಕ್ರಮ ನಿರ್ವಹಿಸಿದರು.