ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮದ ಸಮಾರೋಪ…

ಪುತ್ತೂರು: ತಾಂತ್ರಿಕತೆ ವ್ಯಾಪಕವಾಗಿ ಬೆಳೆಯುತ್ತಿದೆ, ಪ್ರತಿಯೊಂದು ಕ್ಷೇತ್ರದಲ್ಲಿಯೂ ಅದಕ್ಕೆ ತಕ್ಕುದಾದ ತಂತ್ರಜ್ಞಾನದ ಬೆಳವಣಿಗೆಯಾಗುತ್ತಿದೆ. ಇದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮೆಟೀರಿಯಲ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಪಟ್ಟಾಭಿ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭೌತಶಾಸ್ತ್ರ ವಿಭಾಗ ಮತ್ತು ಕರ್ನಾಟಕ ಸೈನ್ಸ್ ಎಂಡ್ ಟೆಕ್ನಾಲಜಿ ಪ್ರಮೋಷನ್ ಸೊಸೈಟಿ (KSTePS) ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನದ ನಿರಂತರ ಪ್ರಗತಿಯಲ್ಲಿ ವಸ್ತು ವಿಜ್ಞಾನದ ಪಾತ್ರ ಎನ್ನುವ ವಿಷಯದ ಬಗ್ಗೆ 4 ದಿನಗಳ ರಾಷ್ಟ್ರಮಟ್ಟದ ಉಪನ್ಯಾಸಕರ ಆನ್‍ಲೈನ್ ಉದ್ದೀಪನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ತಂತ್ರಜ್ಜಾನದಲ್ಲಿ ಅನುಕೂಲದಷ್ಟೇ ಅನನುಕೂಲವೂ ಇದೆ. ಅದನ್ನು ಬಳಸುವ ವಿಧಾನದ ಮೂಲಕ ಇದು ನಿರ್ಧರಿತವಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ, ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ಮುಂದಿನ ಪೀಳಿಗೆಗೆ ಬೋಧಿಸುವುದಕ್ಕಾಗಿ ಅಧ್ಯಾಪಕರು ಹೇಗೆ ಕಲಿಯಬೇಕು ಮತ್ತು ನಿಭಾಯಿಸಬೇಕು ಎನ್ನುವುದನ್ನು ತಿಳಿಸುವುದಕ್ಕೋಸ್ಕರ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದರು.
ಕೈಗಾದ ಭಾಭಾ ಪರಮಾಣು ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಕೆ.ಆರ್.ಮೋಹನ್ ರಾಮ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೂಲವಿಜ್ಞಾನ ಮತ್ತು ಪರಮಾಣು ಕ್ರಿಯೆಗಳಲ್ಲಿ ಒಳಗೊಂಡಿರುವ ಮೂಲ ತತ್ವಗಳು, ವಿಜ್ಞಾನ ಮತ್ತು ತಂತ್ರಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ವಿಕಿರಣ ಶಾಸ್ತ್ರದ ಅನ್ವಯಗಳ ಬಗ್ಗೆ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಶುಭಹಾರೈಸಿದರು.
ಮೈಕ್ರೋಸಾಫ್ಟ್ ಟೀಮ್ಸ್ ಮೂಲಕ ನಡೆದ ನಾಲ್ಕು ದಿನಗಳ ಈ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ನೂರಕ್ಕೂ ಮಿಕ್ಕಿ ಉಪನ್ಯಾಸಕರು ಮತ್ತು ಸಂಶೋಧನಾ ನಿರತರು ಭಾಗವಹಿಸಿದರು.
ಕಾರ್ಯಕ್ರಮದ ಮುಖ್ಯ ಸಂಯೋಜಕ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ, ಸಹಸಂಯೋಜಕ ಡಾ.ಸುನಿಲ್.ಕೆ.ಸಿ, ಮೂಲವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್, ಉಪನ್ಯಾಸಕರಾದ ಪ್ರೊ.ತೇಜಸ್ವಿನಿ.ಎಲ್.ಪಿ, ಪ್ರೊ.ಶ್ವೇತಾಂಬಿಕಾ.ಪಿ, ಪ್ರೊ.ಸಾಯಿಸೌಜನ್ಯ, ಪ್ರೊ.ಶ್ರೀಶರಣ್ಯ ಮತ್ತು ಪ್ರೊ.ನಯನ.ಪಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.

Sponsors

Related Articles

Back to top button