ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲು…

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಚೇತರಿಸಿಕೊಳ್ಳುತ್ತಿದ್ದಾರೆ. ಯಾವುದೇ ಅಪಾಯವಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗಲೇ ಪ್ರಭಾಕರ್ ಭಟ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.