ಹರಿಹರಪುರ ವಲಯ- ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ…

ಕೊಪ್ಪ: ತಾಲ್ಲೂಕಿನ ಹರಿಹರಪುರ ವಲಯದ ಕೆಟಿಕೆ ಸಭಾಭವನದಲ್ಲಿ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಅರವಿಂದ ಸೋಮಯಾಜಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಜಿಲ್ಲಾ ನಿರ್ದೇಶಕರಾದ ಪ್ರಕಾಶ್ ರಾವ್ ಇವರು ಶಿಬಿರದ ತಯಾರಿಯ ಕುರಿತು ಮಾರ್ಗದರ್ಶನ ನೀಡಿದರು. ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳಾದ ತಿಮ್ಮಯ್ಯನಾಯ್ಕ್, ಯೋಜನಾಧಿಕಾರಿ ನಿರಂಜನ್ ಎಂ ಆರ್, ಪಂಚಾಯತ್ ಅಧ್ಯಕ್ಷರಾದ ಶರೀಫ್, ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ದಿವಾಕರ್ ಭಟ್ ,ಜನಜಾಗೃತಿ ವೇದಿಕೆ ಸದಸ್ಯರಾದ ಬಾಲಕೃಷ್ಣ ರವರು ಉಪಸ್ಥಿತರಿದ್ದರು.

Sponsors

Related Articles

Back to top button