ಏ. 25 – ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಕ್ಷೇತ್ರವಾರು ಸಭೆ…

ಮಂಗಳೂರು: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ (ನಗರ) ಜಿಲ್ಲಾ ಪಂಚಾಯತಿ ವ್ಯಾಪ್ತಿಗಳಲ್ಲಿ ಬರುವ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರು, ಪ್ರಮುಖ ನಾಯಕರು, ಕಾರ್ಯಕರ್ತರ ಜೊತೆ ಕ್ಷೇತ್ರವಾರು ಸಭೆಯನ್ನು ಏ. 25 ರಂದು ಹಮ್ಮಿಕೊಂಡಿರುತ್ತಾರೆ.
ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕರಾದ ವಸಂತ ಬಂಗೇರ, ಮಾಜಿ ಸಚಿವರಾದ ಗಂಗಾಧರ ಗೌಡ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕರಾದ ಸುಭಾಷ್ ಚಂದ್ರ ಶೆಟ್ಟಿ ಕೊಳ್ನಾಡು ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ (ನಗರ)ಯ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್ ಕುರ್ತೋಡಿ ರವರು ಭಾಗವಹಿಸಲಿದ್ದಾರೆ.
ಬೆಳ್ತಂಗಡಿ ಬ್ಲಾಕ್ (ನಗರ) ವ್ಯಾಪ್ತಿಯ ಆಯಾ ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಗ್ರಾಮ ಪಂಚಾಯತ್‍ನ ಚುನಾಯಿತ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಎಲ್ಲಾ ಮಾಜಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಸದಸ್ಯರು, ನಗರ ಪಂಚಾಯತ್ ಸದಸ್ಯರು ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಘಟಕ ಅಧ್ಯಕ್ಷರು ಮತ್ತು ಜಿಲ್ಲಾ ಸಮಿತಿ ಸದಸ್ಯರು ಮತ್ತು ಪದಾಧಿಕಾರಿಗಳು, ಬೂತ್ ಸಮಿತಿ ಮತ್ತು ಗ್ರಾಮ ಸಮಿತಿ ಅಧ್ಯಕ್ಷರು, ಚೀಫ್ ಎನ್ರೋಲರ್ , ಎನ್ರೋಲರ್ ಹಾಗೂ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Mlc1 Scaled E1650704370631 300x121 Mlc2 Scaled E1650704445731 300x121

Related Articles