ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಪುರಸ್ಕಾರ…

ಬಂಟ್ವಾಳ:ಸಾಲ ವಸೂಲಾತಿಯಲ್ಲಿ ದಕ್ಷಿಣ ಕನ್ನಡ ಜಲ್ಲೆಗೆ ಪ್ರಥಮ ಸ್ಥಾನಿಯಾಗುವುದರ ಜತೆಗೆ ಉತ್ತಮ ವ್ಯವಹಾರ ನಡೆಸಿದ ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ನ ವತಿಯಿಂದ ಪುರಸ್ಕಾರ ಲಭಿಸಿದೆ.
ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಬ್ಯಾಂಕ್‍ನ ವಾರ್ಷಿಕ ಮಹಾಸಭೆಯಲ್ಲಿ 2018-19 ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆಗೈದ ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ಸುದರ್ಶನ್ ಜೈನ್ ಹಾಗೂ ವ್ಯವಸ್ಥಾಪಕ ಶೇಖರ ಎಂ. ಅವರನ್ನು ಅಭಿನಂದಿಸಲಾಯಿತು. ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ನ ಅಧ್ಯಕ್ಷ ಕೆ.ಷಡಕ್ಷರಿ, ವ್ಯವಸ್ಥಾಪಕ ನಿರ್ದೇಶಕ ಎ.ಸಿ.ದಿವಾಕರ್ ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button