ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನ ಪನೋಲಿಬೈಲು – ನೂತನ ಆನ್ನ ಛತ್ರಕ್ಕೆ ಶಿಲಾನ್ಯಾಸ…
ಬಂಟ್ವಾಳ: ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನ ಪನೋಲಿಬೈಲು ಸಜಿಪಮೂಡ ಬಂಟ್ವಾಳ ಇಲ್ಲಿ ಅಂದಾಜು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಆನ್ನ ಛತ್ರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಶಿಲಾನ್ಯಾಸ ನೆರವೇರಿಸಿದರು.
ಧಾರ್ಮಿಕ ವಿಧಿ-ವಿಧಾನಗಳನ್ನು ಸಜಿಪಮಾಗಣಿ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಶ್ರದ್ಧಾ ಭಕ್ತಿಯಿಂದ ನೆರವೇರಿಸಿದರು. ದೈವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿ ಶ್ರೀಮತಿ ಜಯಮ್ಮ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ, ಪ್ರಮುಖರಾದ ಗಡಿ ಪ್ರಧಾನರಾದ ಮುಂಡಪ್ಪ ಶೆಟ್ಟಿ ಯಾನೆ ಕೋಚ ಬಂಡಾರಿ, ರವೀಂದ್ರ ಕಂಬಳಿ, ಚಂದ್ರಹಾಸ ನಾಯಕ, ಶಿವರಾಮ ಬಂಡಾರಿ, ಯಶೋಧರ ರೈ, ವಿವೇಕ ಶೆಟ್ಟಿ, ಜಯ ಶೆಟ್ಟಿ, ಶ್ರೀಕಾಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.