ರೋಟರಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಯಾಗಿ ರೊ| ದಯಾನಂದ ಆಳ್ವ ಆಯ್ಕೆ…
ಸುಳ್ಯ: ವಿಜಯಾ ಬ್ಯಾಂಕ್‌ನ ನಿವೃತ್ತ ಸೀನಿಯರ್ ಮನೇಜರ್ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿಯಾಗಿರುವ ರೊ| ಯಸ್. ದಯಾನಂದ ಅಳ್ವ ರವರು ರೋಟರಿ ವಿದ್ಯಾಸಂಸ್ಥೆಗಳನ್ನು ಮುನ್ನಡೆಸುತ್ತಿರುವ ರೋಟರಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಯಾಗಿ ಆಯ್ಕೆಯಾಗಿರುತ್ತಾರೆ.
ಮೇ 25ರಂದು ನಡೆದ ಸುಳ್ಯ ರೋಟರಿ ಸಭೆಯಲ್ಲಿ 3 ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಅವರೊಂದಿಗೆ ಪ್ರಸ್ತುತ ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ರೊ| ಗಿರಿಜಾಶಂಕರ್ ತುದಿಯಡ್ಕ ಇವರು ಅವಿರೋಧವಾಗಿ ಮರು ಆಯ್ಕೆಯಾಗಿರುತ್ತಾರೆ.