ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗಳಿಂದ ಗೂನಡ್ಕದಲ್ಲಿ ಹೆದ್ದಾರಿ ಪರಿಶೀಲನೆ…
ಸುಳ್ಯ: ಸಂಪಾಜೆ ಗ್ರಾಮದ ಗೂನಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೋರಿ ಹಾಗೂ ಚರಂಡಿ ಯಲ್ಲಿ ಹೂಳು ತುಂಬಿ ರಸ್ತೆಯಲ್ಲಿ ನೀರು ಹರಿದು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ ಟಿ. ಎಮ್. ಶಾಹಿದ್ ತೆಕ್ಕಿಲ್ ಹಾಗೂ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಜಿಲ್ಲಾಧಿಕಾರಿ ಯವರು ಸುಳ್ಯದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಗಮನಕ್ಕೆ ತಂದಿದ್ದರು. ಈ ನಿಟ್ಟಿನಲ್ಲಿ ಹೆದ್ದಾರಿ ಇಲಾಖೆಯ ತಂಡ ಹಾಗೂ ಇಂಜಿನಿಯರ್ ಸ್ಥಳಕ್ಕೆ ಆಗಮಿಸಿ ಕೂಡಲೇ ಸರಿ ಪಡಿಸುವುದಾಗಿ ತಿಳಿಸಿದರು. ಕಲ್ಲುಗುಂಡಿ ಪೇಟೆಯಲ್ಲಿ ಒಳಚರಂಡಿ ಹಾಗೂ ಸಂಪಾಜೆ ಕೂಲಿಶೆಡ್ ಬಳಿ ತಡೆಗೋಡೆ ಕುಸಿದ ಸ್ಥಳ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಟಿ. ಎಮ್. ಶಾಹಿದ್ ತೆಕ್ಕಿಲ್, ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರಿ ಮುಂಡಡ್ಕ, ಸವಾದ್ ಉಪಸ್ಥಿತರಿದ್ದರು.