ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕ್ಷೇತ್ರವಾರು ಕಾಂಗ್ರೆಸ್ ಕಾರ್ಯಕರ್ತರ ಸಭೆ…

ಬಂಟ್ವಾಳ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಜೀಪ ಮುನ್ನೂರು, ಕೊಳ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಜೂ.9 ರಂದು ಹಮ್ಮಿಕೊಂಡಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು , ವಿಧಾನ ಪರಿಷತ್ತಿನ ಸದಸ್ಯರಾದ ಕೆ.ಹರೀಶ್ ಕುಮಾರ್ ರವರು ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ , ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಪಾಣೆಮಂಗಳೂರು ಬ್ಲಾಕ್‌ನ ಅಧ್ಯಕ್ಷರಾದ ಶ್ರೀ ಸುದೀಪ್ ಕುಮಾರ್ ಶೆಟ್ಟಿ ರವರು ಭಾಗವಹಿಸಿದರು.
ಪಂಚಾಯಿತಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸಲು ಸೂಕ್ತ ಪರಿಹಾರಕ್ಕಾಗಿ ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುವುದಾಗಿ ಮಂಜುನಾಥ ಭಂಡಾರಿ ಅವರು ತಿಳಿಸಿದರು. ಪಾಣೆಮಂಗಳೂರು ಗ್ರಾಮೀಣ ಭಾಗದ ಜನರ ಹಲವಾರು ಅಭಿವೃದ್ಧಿ ಕಾರ್ಯಗಳ ಅಹವಾಲುಗಳನ್ನು ಸ್ವೀಕರಿಸಿ, ಅವುಗಳನ್ನು ಶೀಘ್ರವಾಗಿ ನೆರವೇರಿಸುವ ಕುರಿತಾಗಿ ಭರವಸೆಯನ್ನೂ ಅವರು ನೀಡಿದರು.

IMG 20220609 WA0045 300x135 IMG 20220609 WA0044 300x135 IMG 20220609 WA0043 300x200 IMG 20220609 WA0042 300x200

Related Articles