ಅ.7: ಪುತ್ತೂರು ನಗರ `ಜಲಸಿರಿ’ ಯೋಜನೆಯ ಕಾಮಗಾರಿ ಪ್ರಾರಂಭೋತ್ಸವ….
ಪುತ್ತೂರು: ಪುತ್ತೂರಿನ ನಗರಸಭೆ ಮತ್ತು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್‍ಸಿ) ಇವುಗಳ ಜಂಟಿ ಸಹಯೋಗದಲ್ಲಿ ಪುತ್ತೂರು ನಗರಕ್ಕೆ 24*7 ಕುಡಿಯುವ ನೀರು ಸರಬರಾಜು ಯೋಜನೆಯಾಗಿರುವ `ಜಲಸಿರಿ’ ಯೋಜನೆಯ ಕಾಮಗಾರಿ ಪ್ರಾರಂಭೋತ್ಸವ ಕಾರ್ಯಕ್ರಮ ಅ.7ರಂದು ಬೆಳಗ್ಗೆ ಪುತ್ತೂರು ಪುರಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇ ಗೌಡ, ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಕೆಯುಐಡಿಎಫ್‍ಸಿ ವ್ಯವಸ್ಥಾಪಕ ನಿರ್ದೇಶಕರಾದ ರಮೇಶ್ ಡಿ.ಎಸ್., ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಕೆಯುಐಡಿಎಫ್‍ಸಿ ಉಪ ಯೋಜನಾ ನಿರ್ದೇಶಕರಾದ ಬಾಲಕೃಷ್ಣ ಬಿ.ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕೆಯುಐಡಿಎಫ್‍ಸಿ ಪ್ರಕಟಣೆ ತಿಳಿಸಿದೆ.