ಕಲ್ಲುಗುಂಡಿ ಆರ್. ಎಂ. ಎಸ್. ಎ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿ ಮಂಡಲ ಪದಗ್ರಹಣ…

ಸುಳ್ಯ: ಸಂಪಾಜೆ ಕಲ್ಲುಗುಂಡಿ ಆರ್. ಎಂ. ಎಸ್. ಎ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿ ಮಂಡಲ ಪದಗ್ರಹಣ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕೊಂಡಲಕಾಡು ನಾರಾಯಣ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಪ್ರೌಢಶಾಲೆ ವಿಭಾಗದ ಅಧ್ಯಕ್ಷರಾದ ಹೊನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಎಸ್. ಎಸ್. ಎಲ್. ಸಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿದರು. ವೇದಿಕೆಯಲ್ಲಿ ಪಂಚಾಯತ್ ಸದಸ್ಯರುಗಳಾದ ರಜನಿ ಶರತ್, ಹಿರಿಯ ಪ್ರಾಥಮಿಕ ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಮಧುಸೂದನ್, ಶಾಲಾ ಮುಖ್ಯ ಶಿಕ್ಷಕರು, ಅಧ್ಯಾಪಕರು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ದಾನಿಗಳಿಂದ ಕೊಡ ಮಾಡುವ ಸಹಾಯ ಧನ ವಿತರಿಸಲಾಯಿತು.