ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದ ವತಿಯಿಂದ ತಾಂತ್ರಿಕ ಉಪನ್ಯಾಸ…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದ ವತಿಯಿಂದ ” ಅಪ್ಲಿಕೇಶನ್ ಆಫ್ ಮಷೀನ್ ಲರ್ನಿಂಗ್ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್” ಎಂಬ ವಿಷಯದ ಕುರಿತಾದ ತಾಂತ್ರಿಕ ಉಪನ್ಯಾಸ ಜೂ.13 ರಂದು ಆಯೋಜಿಸಲಾಗಿತ್ತು.
ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿ ಸಂಘ ಹಾಗೂ ISTE ಸ್ಟೂಡೆಂಟ್ ಚಾಪ್ಟರ್ (KA -109) ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ನಿಟ್ಟೆ NMAMIT ಇಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಅರವಿಂದ ಸಿ ವಿ ಪಾಲ್ಗೊಂಡಿದ್ದರು.
ವಿಭಾಗ ಮುಖ್ಯಸ್ಥ ಪ್ರೊ. ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಪ್ರವೀಣ್ ಜಿ ಬಿ ಹಾಗೂ ಪ್ರೊ ಅಕ್ಷತಾ ಎನ್.ಎಂ. ಕಾರ್ಯಕ್ರಮ ಸಂಯೋಜಿಸಿದ್ದರು.
ವಿಭಾಗದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.