ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಇಲೆಕ್ಟ್ರಾನಿಕ್ಸ್ ವಿಭಾಗದ ವತಿಯಿಂದ ತಾಂತ್ರಿಕ ಉಪನ್ಯಾಸ…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ವತಿಯಿಂದ “MNC ಜಾಬ್ ಅಪಾರ್ಚುನಿಟಿಸ್ ಇನ್ ಕೋರ್ ಡೊಮೇನ್ ಫ಼ಾರ್ ECE ” ಎಂಬ ವಿಷಯದ ಕುರಿತಾದ ತಾಂತ್ರಿಕ ಉಪನ್ಯಾಸ ಜೂ.17 ರಂದು ಆಯೋಜಿಸಲಾಗಿತ್ತು.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿ ಸಂಘ ಹಾಗೂ ISTE ಸ್ಟೂಡೆಂಟ್ ಚಾಪ್ಟರ್ (KA -109) ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲದ ಮಣಿಪಾಲ್ ಎಜು-ಕೇರ್ ಸಂಸ್ಥೆಯ ಸ್ಥಾಪಕ ಮತ್ತು ನಿರ್ದೇಶಕ ಸಚಿನ್ ಪ್ರಭು ಭಾಗವಹಿಸಿದ್ದರು.
ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ವಿಭಾಗ ಮುಖ್ಯಸ್ಥ ಪ್ರೊ. ಗಂಗಾಧರ, ಕಾರ್ಯಕ್ರಮ ಸಂಯೋಜಕ, ಸಹಾಯಕ ಪ್ರಾಧ್ಯಾಪಕ ಪ್ರೊ.ಶಶಾಂಕ್ ಎಂ ಗೌಡ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸ್ಮಿತಾಶ್ರೀ ಸ್ವಾಗತಿಸಿ, ಫಾತಿಮಾ ರುಕ್ಸಾನಾ ಪ್ರಾರ್ಥಿಸಿದರು. ಅಬ್ದುಲ್ ಮುಫೀದ್ ಅತಿಥಿಗಳ ಪರಿಚಯ ಮಾಡಿದರು. ಶಾಬಾಜ್ ವಂದಿಸಿದರು. ಮೌನ ಕಾರ್ಯಕ್ರಮ ನಿರೂಪಿಸಿದರು.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು.

Sponsors

Related Articles

Back to top button