ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ…

ಮೂಡುಬಿದ್ರಿ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜೂ. 30 ರಂದು ನಡೆಯಿತು.

ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಪಾಂಡು ನಾಯ್ಕ್ , ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಗಂಗಾಧರ, ಎಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಪ್ರಸನ್ನ ಕುಮಾರ್, ಮಾಹಿತಿ ತಂತ್ರಜ್ಞಾನ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಪ್ರೊ. ರಶ್ಮಿ ಪಿ. ಸಿ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರೊ. ವಾಣಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ತಮ್ಮ ಇಂಜಿನಿಯರಿಂಗ್ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು. ಅಂತಿಮ ವರ್ಷದ ಎಲ್ಲ ವಿದ್ಯಾರ್ಥಿಗಳಿಗೆ ನೆನೆಪಿನ ಕಾಣಿಕೆ ವಿತರಿಸಲಾಯಿತು.
ಪ್ರೊ. ವಾಣಿ ಸ್ವಾಗತಿಸಿದರು. ಫಾತಿಮಾ ರುಕ್ಸಾನಾ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರೊ. ಶಶಾಂಕ್. ಎಂ . ಗೌಡ ವಂದಿಸಿದರು. ಪ್ರೊ. ನಾಝಿಯಾ ಕಾರ್ಯಕ್ರಮ ನಿರೂಪಿಸಿದರು.

IMG 20220630 WA0060 300x200

IMG 20220630 WA0061 300x200

IMG 20220630 WA0062 300x200

IMG 20220630 WA0064 300x200

IMG 20220630 WA0065 1 300x200

IMG 20220630 WA0047 300x200

IMG 20220630 WA0039 300x200

Related Articles