ಸುದ್ದಿ

ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆ ಸತ್ಯಾಗ್ರಹ – ಮಂಜುನಾಥ ಭಂಡಾರಿ ಭಾಗಿ…

ಬೆಂಗಳೂರು: ಕೇಂದ್ರ ಸರ್ಕಾರವು ತನಿಖೆಯ ನೆಪದಲ್ಲಿ ಇಡಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ಸತ್ಯಾಗ್ರಹ ನಡೆಯುತ್ತಿದೆ.
ಪ್ರತಿಭಟನೆಯ ಎರಡನೇ ದಿನವಾದ ಇಂದು ಕೂಡ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರೂ, ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿಯವರು ಭಾಗವಹಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಶ್ರೀ ವೀರಪ್ಪ ಮೊಯ್ಲಿ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಅಭಿಷೇಕ್ ದತ್ತ್ ಈ ಮೌನ ಪ್ರತಿಭಟನೆ ಸತ್ಯಾಗ್ರಹದಲ್ಲಿ ಉಪಸ್ಥಿತರಿದ್ದರು.

Advertisement

Related Articles

Back to top button