ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ – ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟ ಖಂಡನೆ…

ಸುಳ್ಯ: ಒಂದು ವಾರದ ಅಂತರದಲ್ಲಿ ಅಕ್ಕಪಕ್ಕದ ಗ್ರಾಮದ ಕಳಂಜದ ಮಸೂದ್ ಮತ್ತು ನೆಟ್ಟಾರಿನ ಪ್ರವೀಣ್ ಎಂಬುವವರು ದುಷ್ಕರ್ಮಿಗಳ ದಾಳಿಗೊಳಗಾಗಿ ಹತ್ಯೆಗೀಡಾಗಿರುವುದು ಅತ್ಯಂತ ಖಂಡನೀಯ ವಿಚಾರ.
ಮಸೂದ್ ಮತ್ತು ಪ್ರವೀಣ್ ಹತ್ಯೆಯ ಎರಡೂ ಪ್ರಕರಣಗಳ ನೈಜ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕಾಗಿದೆ. ಈ ಸಮಯದಲ್ಲಿ ಎಲ್ಲಾ ಸಮುದಾಯದವರು ಶಾಂತಿ ಕಾಪಾಡಿ, ಸಂಯಮದಿಂದ ನಡೆದು ಕೊಳ್ಳಬೇಕೆಂದು ಮತ್ತು ನೈಜ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕಾಗಿ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟವು ಮನವಿ ಮಾಡಿದೆ.
ಹತ್ಯೆಗೀಡಾದ ಮಸೂದ್ ಮತ್ತು ಪ್ರವೀಣ್ ಕುಟುಂಬಕ್ಕೆ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಒಕ್ಕೂಟ ಆಗ್ರಹಿಸುತ್ತದೆ ಹಾಗೆಯೇ ಜಿಲ್ಲಾಡಳಿತವು ಜನರ ಆಸ್ತಿ ಪಾಸ್ತಿಗಳಿಗೆ ಯಾವುದೇ ಹಾನಿಯಾಗದಂತೆ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸುವಂತೆಯೂ ಒಕ್ಕೂಟವು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದೆ.