ಶ್ರೀ ಕೃಷ್ಣಮೂರ್ತಿ ಕುಲಕರ್ಣಿಯವರಿಗೆ ಚುಟುಕು ಕವಿರತ್ನ ಪ್ರಶಸ್ತಿ…

ಬಂಟ್ವಾಳ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ (ರಿ.), ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಪೊಳಲಿ ರಾಜರಾಜೇಶ್ವರಿ ಸನ್ನಿಧಿಯಲ್ಲಿರುವ ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ಸಾಹಿತ್ಯ ಕಮ್ಮಟ ಆ. 1 ರಂದು ನಡೆಯಿತು ಹಾಗೂ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ರಾಜ್ಯ ಸಂಚಾಲಕರಾದ ಶ್ರೀ ಕೃಷ್ಣಮೂರ್ತಿ ಕುಲಕರ್ಣಿಯವರಿಗೆ ಕನ್ನಡ ನಾಡು ನುಡಿ ಸಂಸ್ಕೃತಿಗೆ ಸಲ್ಲಿಸಿದ ಸೇವೆಗಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದಿಂದ ಚುಟುಕು ಕವಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ರಾಧಾಕೃಷ್ಣ ಭಟ್.ಕೆ.ಮುಖ್ಯಶಿಕ್ಷಕರು ಸರಕಾರಿ ಪ್ರೌಢಶಾಲೆ ಪೊಳಲಿ ಇವರನ್ನೂ ಆದರ್ಶ ಶಿಕ್ಷಕ ಎನ್ನುವ ನೆಲೆಯಲ್ಲಿ ಸನ್ಮಾನಿಸಲಾಯಿತು. ಕ.ಚು.ಸಾ.ಪ ಜಿಲ್ಲಾಧ್ಯಕ್ಷರಾದ ಶ್ರೀ ಜಯಾನಂದ ಪೆರಾಜೆ, ಡಾ.ವಾಣಿಶ್ರೀ ಕಾಸರಗೋಡು, ಸಂಪನ್ಮೂಲ ವ್ಯಕ್ತಿ ಡಾ.ಕೊಳ್ಚಪ್ಪೆ ಗೋವಿಂದ ಭಟ್, ಕ.ಚು.ಸಾ.ಪ.ಪ್ರಧಾನ ಕಾರ್ಯದರ್ಶಿ ಶಾಂತಾ ಪುತ್ತೂರು, ಸರಕಾರಿ ಪ್ರೌಢಶಾಲೆ ಪೊಳಲಿಯ ಮುಖ್ಯ ಶಿಕ್ಷಕರಾದ ರಾಧಾಕೃಷ್ಣ ಭಟ್ ಕೆ, ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ ಕಾಸರಗೋಡು ಇದರ ಕಾರ್ಯದರ್ಶಿ ಗುರುರಾಜ್ ಎಂ.ಆರ್.ಕಾಸರಗೋಡು ಉಪಸ್ಥಿತರಿದ್ದರು.

Sponsors

Related Articles

Back to top button