ಸುದ್ದಿ

ದ.ಕ – ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ…

ಮಂಗಳೂರು: ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಸಂಚರಿಸಿಲು ನಿರ್ಬಂಧ ವಿಧಿಸಿ ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ.
ಮಂಗಳೂರಿನ ಕಮಿಷನರ್‌ ಕಚೇರಿಯಲ್ಲಿ ದ.ಕ, ಉಡುಪಿ ಜಿಲ್ಲಾ ಪೊಲೀಸ್‌ ಹಾಗೂ ನಗರ ಕಮಿಷನರ್‌ ವ್ಯಾಪ್ತಿಯ ಪೊಲೀಸ್‌ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಹಸವಾರರು ಅನೇಕ ಬಾರಿ ಅಪರಾಧಗಳಲ್ಲಿ ಭಾಗಿಯಾಗುವುದು ಜಾಸ್ತಿ ಕಂಡುಬಂದ ಹಿನ್ನಲೆ ಈ ಕ್ರಮ ಜಾರಿಗೊಳಿಸಿದ್ದು ಮುಖ್ಯವಾಗಿ ಯುವಕರ ಮೇಲೆ ನಿಗಾ ಇರಿಸಲಾಗುವುದು. ಹಿರಿಯ ನಾಗರಿಕರು ಮತ್ತು ಮಕ್ಕಳನ್ನು, ಮಹಿಳೆಯರನ್ನು ಹೊರತುಪಡಿಸಿ ಉಳಿದವರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಂತಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

Advertisement

Related Articles

Back to top button