ವೀರಕಂಬ- ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ…

ಬಂಟ್ವಾಳ: ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಶ್ರೀ ಶಾರದ ಭಜನಾ ಮಂದಿರ ವೀರಕಂಬ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಬ ಇದರ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಶ್ರೀ ಶಾರದಾ ಭಜನಾ ಮಂದಿರ ವೀರಕಂಬದಲ್ಲಿ ಜರಗಿತು.
ನಂತರ ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಅವರು ವರಮಹಾಲಕ್ಷ್ಮಿ ಪೂಜೆಯ ಮಹತ್ವ, ಆಚರಣೆ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಪ್ರೀತ ಮಾತಾಜಿ ಭಾರತ ಮಾತಾ ಪೂಜನ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.
ವೇದಿಕೆಯಲ್ಲಿ ವೀರಕಂಬ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ದಿನೇಶ್, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ಶ್ರೀಮತಿ ಪ್ರೇಮ ಜಯಕರ ಆಚಾರ್ಯ ಉಪಸ್ಥಿತರಿದ್ದರು. ಸಮಿತಿ ಸದಸ್ಯ ಕುಸುಮ ಶೆಟ್ಟಿ ಪ್ರಾರ್ಥಿಸಿ, ಸುಚಿತ್ರ ಸ್ವಾಗತಿಸಿ, ಕುಸುಮ ವಂದಿಸಿದರು. ಸೌಮ್ಯ ವೇಣುಗೋಪಾಲ್ ಕಾರ್ಯಕ್ರಮ ನಿರ್ವಹಿಸಿದರು.

Sponsors

Related Articles

Back to top button