ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘ – 2021 -22 ನೇ ಸಾಲಿನ ವಿಶಿಷ್ಟ ಸಾಧನ ಪ್ರಶಸ್ತಿ…

ಸುಳ್ಯ: ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘ ಸಂಸ್ಥೆಗೆ 2021-22 ನೇ ಸಾಲಿನ ವಿಶಿಷ್ಟ ಸಾಧನ ಪ್ರಶಸ್ತಿ ದೊರೆತಿದೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಈ ಪ್ರಶಸ್ತಿ ನೀಡುತ್ತಿದ್ದು, ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘ ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಗೆ ಈ ಪ್ರಶಸ್ತಿ ಲಭಿಸಿದೆ. ಇಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ. ಎನ್. ರಾಜೇಂದ್ರಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.
ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಇಕ್ಬಾಲ್ ಎಲಿಮಲೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಎ.ಕೆ. ಹಸೈನಾರ್ ಕಲ್ಲುಗುಂಡಿ, ಆರ್.ಕೆ. ಮಹಮ್ಮದ್ ಉಪಸ್ಥಿತರಿದ್ದರು.

Related Articles