ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ…

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ “ಕೋವಿಡ್-19ರ ಕಾರಣದಿಂದ ಕಾರ್ಯ ಚಟುವಟಿಕೆಗಳ ಮಾದರಿಯಲ್ಲಿ ಬದಲಾವಣೆ – ದಕ್ಷಿಣ ಕನ್ನಡದಲ್ಲಿ ಒಂದು ಪ್ರಾಯೋಗಿಕ ಅಧ್ಯಯನ” ಎನ್ನುವ ಯೋಜನಾ ಪ್ರಬಂಧಕ್ಕೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ ದೊರೆತಿದೆ.
ಆ.12 ಮತ್ತು 13 ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಹಾಗೂ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ನಡೆದ 45ನೇ ಸರಣಿಯ ಕೆಎಸ್‍ಸಿಎಸ್‍ಟಿ ಸ್ಟೂಡೆಂಟ್ ಪ್ರಾಜೆಕ್ಟ್ ಪ್ರೋಗ್ರಾಮ್ ನ ಸ್ನಾತಕೋತ್ತರ ಎಂಬಿಎ ವಿಭಾಗದಲ್ಲಿ ವಿದ್ಯಾರ್ಥಿಗಳು ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿಯೊಂದಿಗೆ ನಗದು ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕರಿಸಿದ್ದಪ್ಪ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಜೀವಿತಾ.ಬಿ.ವಿ ಹಾಗೂ ಪ್ರೊ.ರೇಶ್ಮಾ ಪೈ.ಎ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಅಂಕಿತ, ಶ್ವೇತಾ.ಕೆ, ಮಂಜುನಾಥ್.ಎಚ್.ಎಮ್ ಮತ್ತು ಕೃತನ್.ಬಿ.ಕೆ ಈ ಅಧ್ಯಯನವನ್ನು ಮಾಡಿ ಯೋಜನಾ ವರದಿಯನ್ನು ಮಂಡಿಸಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Sponsors

Related Articles

Back to top button