ಪುತ್ತೂರು ಬಾಲವನದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ….

ಪುತ್ತೂರು: ನಾವೆಲ್ಲರೂ ಕಾರಂತ ಎಂಬ ಮಹಾನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾಗಿದ್ದು, ಪ್ರಸ್ತುತ ಕಾರಂತರ ಅರಾಧನೆಯ ಕಾಲವಲ್ಲ, ಅವರ ಅವಾಹನೆಯನ್ನು ನಾವು ಮಾಡಬೇಕಾಗಿದೆ. ಅವರ ಬದುಕು, ಜೀವನ ಶೈಲಿ, ಸಾಧನೆಗಳು ಮುಂದಿನ ತಲೆಮಾರಿಗೆ ತಲುಪಿಸುವ ಕೆಲಸವಾಗಬೇಕಾಗಿದೆ ಎಂದು ಖ್ಯಾತ ಸಾಹಿತಿ ಹಾಗೂ ಚಿಂತಕ ಜಯಂತ ಕಾಯ್ಕಿಣಿ ಹೇಳಿದರು.
ಅವರು ಗುರವಾರ ಪುತ್ತೂರಿನ ಬಾಲವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ.ಶಿವರಾಮ ಕಾರಂತರ ಬಾಲವನ ಪರ್ಲಡ್ಕ, ಸಹಾಯಕ ಆಯುಕ್ತರ ಕಚೇರಿ ಪುತ್ತೂರು ಇವುಗಳ ಸಹಯೋಗದಲ್ಲಿ ನಡೆದ ಡಾ. ಶಿವರಾಮ ಕಾರಂತರ 118ನೇ ಜನ್ಮ ದಿನೋತ್ಸವ ಹಾಗೂ ಬಾಲವನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನಲ್ಲಿ ಕಾರಂತ ಥೀಂ ಪಾರ್ಕ್ ನಿರ್ಮಿಸುವ ಮೂಲಕ ಅವರ ಹೆಸರನ್ನು ಉಳಿಸಿಕೊಳ್ಳುವ ಕೆಲಸವನ್ನು ಮಾಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರನ್ನು ಸನ್ಮಾನಿಸಲಾಯಿತು. ಬಾಲ ವಿಜ್ಞಾನಿ ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯದ ವಿದ್ಯಾರ್ಥಿ ಅಮನ್ ಕೆ.ಎ ಅವರನ್ನು ಪುರಸ್ಕರಿಸಲಾಯಿತು. ಸನ್ಮಾನಿತರ ಪರವಾರಿ ಚಿದಂಬರ ಬೈಕಂಪಾಡಿ ಮಾತನಾಡಿದರು.
ವೇದಿಕೆಯಲ್ಲಿ ಡಾ. ಶಿವರಾಮ ಕಾರಂತರ ಪುತ್ರಿ, ಖ್ಯಾತ ಒಡಿಸ್ಸಿ ನೃತ್ಯ ಕಲಾವಿದೆ ಹಾಗೂ ಬಾಲವನ ಅಭಿವೃದ್ಧಿ ಸಮಿತಿ ಸದಸ್ಯೆ ಕ್ಷಮಾ ರಾವ್, ಪುತ್ತೂರು ಉಪವಿಭಾಗಾಧಿಕಾರಿಯಾದ ಬಾಲವನ ಅಭಿವೃದ್ಧಿ ಸಮಿತಿ ಸದಸ್ಯ ಕಾರ್ಯದರ್ಶಿ ಹೆಚ್.ಕೆ. ಕೃಷ್ಣಮೂರ್ತಿ, ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ, ತಾ.ಪಂ. ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ನಗರಸಭಾ ಸದಸ್ಯರಾದ ಶೈಲಾ ಪೈ, ವಿದ್ಯಾಗೌರಿ, ಇಂದಿರಾ ಆಚಾರ್ಯ. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ. ಪುರಂದರ ಭಟ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ. ವಿಜಯ ಹಾರ್ವಿನ್ ಮತ್ತಿತರರು ಉಪಸ್ಥಿತರಿದ್ದರು.
ಸರ್ಕಾರಿ ಮಹಿಳಾ ಪ.ಪೂ. ಕಾಲೇಜ್‍ನ ಪ್ರಾಂಶುಪಾಲ ಝೇವಿಯರ್ ಡಿಸೋಜ ಸ್ವಾಗತಿಸಿದರು. ತಹಸೀಲ್ದಾರ್ ಅನಂತ ಶಂಕರ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ನಿರೂಪಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button