ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಂದ ಅನುದಾನ ಬಿಡುಗಡೆ…

ಸುಳ್ಯ: ಸಂಪಾಜೆ ಗ್ರಾಮದ ಕಡೆಪಾಲ ಕುಯಿಂತೋಡು ರಸ್ತೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ತನ್ನ ಶಾಸಕ ನಿಧಿಯಿಂದ ರೂ.5 ಲಕ್ಷ ಅನುದಾನವನ್ನು ಒದಗಿಸಿದ್ದಾರೆ.
ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಇ’ ಗೂನಡ್ಕರವರ ಮನವಿಯ ಮೇರೆಗೆ ಈ ಅನುದಾನ ನೀಡಿದ್ದಾರೆಂದು ತಿಳಿದುಬಂದಿದೆ.
ಪೆರುವಾಜೆ ಗ್ರಾ.ಪಂ. ವ್ಯಾಪ್ತಿಯ ಪೆರುವಾಜೆ ಕೊಲ್ಯ ಸಂಪರ್ಕ ರಸ್ತೆ ಅಭಿವೃದ್ಧಿಗೆ ಕೂಡ ರೂ.5 ಲಕ್ಷ ಅನುದಾನವನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಒದಗಿಸಿದ್ದಾರೆ.