ಮೂಡುಬಿದಿರೆ – ರಾಷ್ಟ್ರೀಯ ಕ್ರೀಡಾ ದಿನ ಆಚರಣೆ…

ಮೂಡುಬಿದಿರೆ: ಕನ್ನಡ ಭವನದಲ್ಲಿ ನಡೆದ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮೂಡುಬಿದಿರೆ ಹಾಕಿ ಮಾಂತ್ರಿಕ ಮೇಜರ್ ಜ/ ಧ್ಯಾನ್ ಚಂದ್ ಸಿಂಗ್ ಜನ್ಮದಿನಾಚರಣೆಯ ಅಂಗವಾಗಿ ಆ. 29 ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನದ ಕಾರ್ಯಕ್ರಮವನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ BEO ರಾಜಶ್ರೀ, ದೈಹಿಕ ಶಿಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಸುನಿಲ್ ಮಿರಂದ ಮತ್ತು ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.