ಮೂಡುಬಿದಿರೆ – ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ…

ಮೂಡುಬಿದಿರೆ : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ಸಂತ ಥೋಮಸ್ ವಿದ್ಯಾಸಂಸ್ಥೆಗಳು ಅಲಂಗಾರು ಮೂಡುಬಿದಿರೆ ಇವರ ಸಹಯೋಗದಿಂದ ಅಲಂಗಾರು ಶಾಲಾ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅಲಂಗಾರು ಚರ್ಚಿನ ಧರ್ಮ ಗುರುಗಳಾದ ವಾಲ್ಟರ್ ಡಿಸೋಜಾ, ಮಾಜಿ ಸಚಿವರಾದ ಅಭಯ ಚಂದ್ರ ಜೈನ್, ಪುರಸಭಾ ಸದಸ್ಯರಾದ ಪಿ ಕೆ ಥೊಮಸ್, ಮೂಡುಬಿದಿರೆ ಬಿ ಇ ಓ ರಾಜಶ್ರೀ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಸುನಿಲ್ ಮಿರಂದ, ಶಾಲಾ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

IMG 20220901 WA0039 300x225

IMG 20220901 WA0038 300x225

Related Articles