ಸುದ್ದಿ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಓಣಂ ಆಚರಣೆ…

ಪುತ್ತೂರು: ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು ಇದೊಂದು ಕೇರಳಿಗರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಓಣಂ ಆಚರಣೆಯಲ್ಲಿ ವಿದ್ಯಾರ್ಥಿಗಳು ನಿರ್ಮಿಸಿದ ಬೃಹತ್ ಪೂಕಳಂನ ಮುಂಭಾಗದಲ್ಲಿ ದೀಪ ಬೆಳಗಿಸಿ ಮಾತನಾಡಿದರು.
ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ವಿಷ್ಣುವಿನ ವಾಮನ ಅವತಾರದ ಐತಿಹ್ಯವನ್ನೂ ಇದು ತಿಳಿಸುತ್ತದೆ. ಓಣಂ ಎಲ್ಲರಿಗೂ ಶುಭವನ್ನು ತರಲಿ ಎಂದು ಹಾರೈಸಿದರು.
ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್ ಅನೇಕತೆಯಲ್ಲಿ ಏಕತೆಯನ್ನು ಸಾರುವ ಇಂತಹ ಹಬ್ಬಗಳು ಎಲ್ಲೆಡೆಯೂ ಆಚರಿಸುವಂತಾಗಬೇಕು ಎಂದು ಶುಭ ಹಾರೈಸಿದರು.
ಓಣಂ ಹಬ್ಬದ ಹಿನ್ನೆಲೆಯನ್ನು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯ ತಿರುವತ್ತಿರ ಕಳಿಯನ್ನು ವಿದ್ಯಾರ್ಥಿನಿಯರು ಅಭಿನಯಿಸಿದರು.
ವಿದ್ಯಾರ್ಥಿಗಳಾದ ಸಿಬಿನ್ ರವೀಂದ್ರ ಸ್ವಾಗತಿಸಿ, ವರುಣ್ ವಂದಿಸಿದರು. ವಿಶ್ಮಿತಾ ಮತ್ತು ಭಾವನಾ ಕಾರ್ಯಕ್ರಮ ನಿರ್ವಹಿಸಿದರು.

Advertisement

Related Articles

Back to top button