ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನ – ವಿಜ್ಞಾಪನಾ ಪತ್ರ ಬಿಡುಗಡೆ…

ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಚಂಡಿಕಾನಗರದ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಮಹೋತ್ಸವದ ಸಲುವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದಲ್ಲಿ ಸೆ. 11 ರಂದು ನಡೆಯಿತು.
ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಶನಿವಾರ ಮತ್ತು ಭಾನುವಾರ ಹಲವು ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆದವು, ಮಧ್ಯಾಹ್ನ ವಿಜ್ಞಾಪನಾ ಪತ್ರವನ್ನು ತಂತ್ರಿಗಳು ಗಣ್ಯರ ಸಮ್ಮುಖ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಉದ್ಯಮಿ ರಘುನಾಥ ಸೋಮಯಾಜಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕಾರ್ಯದರ್ಶಿ ಇಂದ್ರೇಶ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ರಾಮಚಂದ್ರ ರಾವ್ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಜತೆ ಕಾರ್ಯದರ್ಶಿ ಐತಪ್ಪ ಪೂಜಾರಿ ವಂದಿಸಿದರು. ಮತ್ತೋರ್ವ ಜತೆ ಕಾರ್ಯದರ್ಶಿ ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಸದಸ್ಯರ ಸಹಿತ ಊರ ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.