ಬಿಸಿರೋಡು – ರಾಷ್ಟ್ರೀಯ ಪೋಷಣ್ ಅಭಿಯಾನ…

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭ ಯೋಜನೆ ಬಂಟ್ವಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವೆ ಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ರಿ.ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಬಿಸಿರೋಡು ಸ್ತ್ರೀ ಶಕ್ತಿ ಭವನದಲ್ಲಿ ಅನ್ನಪ್ರಾಸನ, ಸೀಮಂತ, ಮಹಿಳೆ ಸ್ವಾಸ್ಥ್ಯ ಮತ್ತು ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ನಡೆಯಿತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯದೀಶರು ಮತ್ತು ಜೆ.ಎಮ್,ಎಫ್.ಸಿ.ಬಂಟ್ವಾಳ ಹಾಗೂ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷೆ ಭಾಗ್ಯಮ್ಮ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರು ರೋಗದಿಂದ ಮುಕ್ತವಾಗಿ ಸಂತೋಷ ದ ಜೀವನಕ್ಕಾಗಿ ಪೌಷ್ಟಿಕಾಹಾರ ಸೇವನೆ ಮಾಡಿ ಎಂದರು. ಅಪೌಷ್ಟಿಕತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ ಎಂದು ಅವರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಮಾತನಾಡಿ ದ ಬಂಟ್ವಾಳ ಸಿ.ಡಿ.ಪಿ.ಒ.ಗಾಯತ್ರಿಕಂಬಳಿ , ಸರಕಾರದ ಯೋಜನೆ ಗಳು ಕಾರ್ಯರೂಪಕ್ಕೆ ಬಂದು ಯಶಸ್ವಿಯಾಗಬೇಕಾದರೆ ಫಲಾನುಭವಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಮ್.ಎಫ್.ಸಿ.ಬಂಟ್ವಾಳ, ಹಾಗೂ ತಾ.ಕಾ‌.ಸೇ.ಸ.ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ವೈ ತಳವಾರ, ವಕೀಲರ ಸಂಘ ದ ಅಧ್ಯಕ್ಷ ಬಿ.ಗಣೇಶಾನಂದ ಸೋಮಯಾಜಿ, ಉಪತಹಶೀಲ್ದಾರ್ ರಾಜೇಶ್, ಸಹಾಯಕ ಸರ್ಕಾರಿ ಅಭಿಯೋಜಕಿ ಹರಿಣಿ ಕುಮಾರಿ, ಸಂಪನ್ಮೂಲ ವ್ಯಕ್ತಿ ಸುಮನ ಕ್ರಾಸ್ತ ಉಪಸ್ಥಿತರಿದ್ದರು.
ಮೇಲ್ವಿಚಾರಕಿ ನೀತಾ ಕುಮಾರಿ ಡಿ.ಸ್ವಾಗತಿಸಿ, ಹಿರಿಯ ಮೇಲ್ವಿಚಾರಕಿ ವಂದಿಸಿದರು.
ಹಿರಿಯ ಮೇಲ್ವಿಚಾರಕಿ ಶಾಲಿನಿ ಕಾರ್ಯ ಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ಹಾಗೂ ಅರ್ಜಿಯನ್ನು ವಿತರಿಸಲಾಯಿತು.

Sponsors

Related Articles

Back to top button