ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಎರಡು ಚಿನ್ನ ಪದಕ…
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಎರಡು ಚಿನ್ನ ಪದಕವನ್ನು ಗೆದ್ದುಕೊಂಡಿದ್ದಾರೆ.
ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ಪವಿತ್ರ.ಜಿ ಟ್ರಿಪಲ್ ಜಂಪ್‍ನಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕೀರ್ತಿರಾಜ್.ಕೆ.ಎಸ್ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಇವರು ಸೆಪ್ಟಂಬರ್ 26 ರಿಂದ 28 ರವರೆಗೆ ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ.ಈ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟ ಹಾಗೂ ರಾಜ್ಯಮಟ್ಟದ ಕಿರಿಯರ ಹಾಗೂ ಹಿರಿಯರ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಗಳನ್ನು ಸ್ಥಾಪಿಸಿದ್ದರು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.