ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಅ. 29 ರಂದು ಪದವಿ ಪ್ರದಾನ ಹಾಗೂ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಸಮಾರಂಭ…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 2021 – 22 ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಹಾಗೂ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಅ. 29 ರಂದು ನಡೆಯಲಿದೆ.
ನಿವಿಯಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಸುಯೋಗ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಯೆನೆಪೋಯ ಆಬ್ದುಲ್ಲ ಕು೦ಞ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. 2021 – 22 ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ YEN MILAN ’22 ಕೂಡ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜಾ ಮತ್ತು ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ತಿಳಿಸಿದ್ದಾರೆ.