AICC ನೂತನ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಂದ ಅಭಿನಂದನೆ…

ಸುಳ್ಯ: ಎಐಸಿಸಿ ನೂತನ ಚುನಾಯಿತ ಅಧ್ಯಕ್ಷರು, ಕನ್ನಡಿಗ ಹಿರಿಯ ಮುಖಂಡರು, ಪಕ್ಷದ ಕಟ್ಟಾಳು, ನೇರ ನಡೆ ನುಡಿಯ ಮಾಜಿ ರಾಜ್ಯ ಹಾಗೂ ಕೇಂದ್ರ ಸಚಿವರು, ರಾಜ್ಯ ಸಭಾ ವಿರೋಧ ಪಕ್ಷದ ನಾಯಕರಾಗಿ ಆಡಳಿತ ಪಕ್ಷಕ್ಕೆ ಸಿಂಹ ಸ್ವಪ್ನರಾಗಿರುವ, ಅಪಾರ ಅನುಭವವಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ದೇಶದಲ್ಲಿ ಕಾಂಗ್ರೇಸ್ ಪಕ್ಷವನ್ನು ಪುನರ್ ಸಂಘಟನೆಗೊಳಿಸುವಲ್ಲಿ ಯಶಸ್ವಿಯಾಗಲಿದ್ದಾರೆ ಎಂದು ನೂತನ ಅಧ್ಯಕ್ಷರಿಗೆ ಕಾಂಗ್ರೇಸ್ ಮುಖಂಡ ಟಿ ಎಂ ಶಾಹಿದ್ ತೆಕ್ಕಿಲ್ ಅಭಿನಂದನೆ ಸಲ್ಲಿಸಿದ್ದಾರೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರ ಮತ್ತು ದೇಶದ ಕೋಟ್ಯಂತರ ಕಾಂಗ್ರೇಸ್ ಕಾರ್ಯಕರ್ತರ ಬೆಂಬಲದೊಂದಿಗೆ ಮಲ್ಲಿಕಾರ್ಜುನ್ ಖರ್ಗೆಯವರು ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತು ದೇಶದಲ್ಲಿ ಕಾಂಗ್ರೇಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುತ್ತಾರೆ ಎಂಬ ವಿಶ್ವಾಸವನ್ನು ಕೆಪಿಸಿಸಿ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ವ್ಯಕ್ತಪಡಿಸಿದ್ದಾರೆ.
ಟಿ ಎಂ ಶಾಹಿದ್ ತೆಕ್ಕಿಲ್