ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ – ಕೆಪಿಸಿಸಿಯ ಉಸ್ತುವಾರಿ ವೀಕ್ಷಕರಾದ ಟಿ ಎಂ ಶಾಹೀದ್ ತೆಕ್ಕಿಲ್ ಭೇಟಿ…

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕೆಪಿಸಿಸಿಯ ಉಸ್ತುವಾರಿ ವೀಕ್ಷಕರಾದ ಟಿ ಎಂ ಶಾಹೀದ್ ತೆಕ್ಕಿಲ್ ರವರು ಬೆಳ್ತಂಗಡಿಗೆ ಭೇಟಿ ನೀಡಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿದರು.
ಮಾಜಿ ಸಚಿವರಾದ ಗಂಗಾಧರ್ ಗೌಡ ಹಾಗೂ ಮಾಜಿ ಶಾಸಕರಾದ ವಸಂತ ಬಂಗೇರ ರವರನ್ನು ಭೇಟಿಯಾಗಿ ಪಕ್ಷ ಸಂಘಟನೆ ಹಾಗೂ ಚುನಾವಣೆಯ ಬಗ್ಗೆ ಚರ್ಚಿಸಿದರು. ಈ ಸಂಧರ್ಭದಲ್ಲಿ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷರಾದ ಕೆ ಶೈಲೇಶ್ ಕುಮಾರ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ರಂಜನ್ ಜಿ ಗೌಡ, ಕಾಂಗ್ರೇಸ್ ಮುಖಂಡರಾದ ಸದಾನಂದ ಗೌಡ ಮಾವಜಿ, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related Articles

Back to top button