ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಗೀತಾ ಸಾಹಿತ್ಯ ವೈವಿಧ್ಯ…

ಮೂಡಬಿದಿರೆ : ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಗೀತಾ ಸಾಹಿತ್ಯ ವೈವಿಧ್ಯ’ ಕಾರ್ಯಕ್ರಮವನ್ನು ನ.11 ರಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹೆಸರಾಂತ ಗಾಯಕ,ವಾಗ್ಮಿ ಶ್ರೀ ವಿಠಲ ನಾಯಕ್ ವಿಟ್ಲ ಭಾಗವಹಿಸಿದ್ದರು. ಕಾಲೇಜಿನ ಆವರಣದಲ್ಲಿ ಮುಖ್ಯ ಅತಿಥಿಗಳು ಧ್ವಜಾರೋಹಣವನ್ನು ನೆರೆವೇರಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿನಿಯರು ಪ್ರಾರ್ಥನೆಯೊಂದಿಗೆ ಅತಿಥಿಗಳಿಂದ ದೀಪ ಪ್ರಜ್ವಲನೆ ಹಾಗೂ ಕನ್ನಡಾಂಬೆಗೆ ಪುಷ್ಪನಮನವನ್ನು ಸಲ್ಲಿಸಲಾಯಿತು.
ಮುಖ್ಯ ಅತಿಥಿಗಳಾದ ಶ್ರೀ ವಿಠಲ ನಾಯಕ್ ರವರು, “ಗೀತಾ ಸಾಹಿತ್ಯ ವೈವಿಧ್ಯ ” ಪರಿಕಲ್ಪನೆಯಲ್ಲಿ ‘ ಕನ್ನಡ ಭಾಷೆಯ ಮೂಲಕ ಸಮಾಜದಲ್ಲಿ ಮೌಲ್ಯಗಳನ್ನು ಹೇಗೆ ಬೆಳೆಸಿಕೊಳ್ಳಬೇಕು ಎಂಬುವುದನ್ನು ತಿಳಿಸಿದರು. ಮಾನಸಿಕ, ಸಾಮಾಜಿಕ ಆರೋಗ್ಯವನ್ನು ಬೆಳೆಸುವ ಅಗತ್ಯ ಹಾಗೂ ಮಹತ್ವವನ್ನು ಸಾಹಿತ್ಯ, ಸಂಗೀತದ ಮೂಲಕ ಮನೋಜ್ಞವಾಗಿ ನಿರೂಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್. ಜಿ. ಡಿ’ಸೋಜ ರವರು ‘ಸಾಹಿತ್ಯದ ಕುರಿತು ಒಲವು, ಕಾಳಜಿಯನ್ನು ಮನ ಮುಟ್ಟುವಂತೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಯೆನೆಪೋಯ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹರೀಶ್ ಶೆಟ್ಟಿ, ಕಾರ್ಯಕ್ರಮದ ಸಂಯೋಜಕರಾದ ಶ್ರೀ ಶ್ರೀನಿವಾಸ್ ರವರು ಉಪಸ್ಥಿತರಿದ್ದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆಯನ್ನು ಮುಖ್ಯ ಅತಿಥಿಗಳಿಂದ ಮಾಡಲಾಯಿತು. ಮುಖ್ಯ ಅತಿಥಿಗಳಿಗೆ ಕಾಲೇಜಿನ ಪರವಾಗಿ ಶಾಲು ಹೊದಿಸಿ, ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕ ವೃಂದ, ಬೋಧಕೇತರ ಸಿಬ್ಬಂದಿಗಳು,ವಿದ್ಯಾರ್ಥಿಗಳು ಭಾಗವಹಿಸಿದ್ದರು.