ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ -ಕಾಂಗ್ರೆಸ್ ಮುಖಂಡ ಟಿ.ಎಂ ಶಹೀದ್ ತೆಕ್ಕಿಲ್…
ಕೇಂದ್ರದ,ರಾಜ್ಯದ ಗುಪ್ತಚರ ಇಲಾಖೆ ನಿದ್ರಾವಸ್ಥೆಯಲ್ಲಿದೆ...

ಸುಳ್ಯ: ರಾಜ್ಯದಲ್ಲಿ ದಿನನಿತ್ಯ ಬಾಂಬು ಸ್ಪೋಟ, ಹಾಡುಹಗಲೆ ಕೊಲೆಗಳು, ದರೋಡೆ, ಗುಂಪು ಗಲಭೆಗಳು ಮಿತಿಮೀರಿ ನಡೆಯುತ್ತಿದ್ದು ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಸರಕಾರ ಮತ್ತು ಗೃಹ ಇಲಾಖೆ ಕೈಕಟ್ಟಿ ಕುಳಿತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ ಮತ್ತು ಕೇಂದ್ರದ ರಾಜ್ಯದ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ, ನಿದ್ರಾವಸ್ಥೆಯಲ್ಲಿದೆ ಎಂದು ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಬೆಳ್ತಂಗಡಿ ಉಸ್ತುವಾರಿ ಟಿ.ಎಂ ಶಹೀದ್ ತೆಕ್ಕಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಗಲಭೆಗಳು ಆದರು ನೈಜ ಅಪರಾಧಿಗಳನ್ನು ಬಂದಿಸಲು ಗೃಹ ಇಲಾಖೆ ವಿಫಲವಾಗುತ್ತಿದೆ. ಅಧಿಕಾರಿಗಳಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ, ಒತ್ತಡಗಳು ಹೆಚ್ಚಾಗುತ್ತಿದೆ. ಜನಸಾಮಾನ್ಯರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದು ನೆಮ್ಮದಿಯ ಬದುಕು ಸಾಗಿಸದಂತಾಗಿದೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬು ಸ್ಪೋಟ ಪ್ರಕರಣದಲ್ಲಿ ಗ್ರಹ ಇಲಾಖೆಯು ನ್ಯಾಯ ಸಮ್ಮತ ತನಿಖೆ ನಡೆಸಿ ಸತ್ಯಾ ಸತ್ಯತೆಯನ್ನು ಪತ್ತೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಟಿ.ಎಂ ಶಹೀದ್ ತೆಕ್ಕಿಲ್ ಸರಕಾರವನ್ನು ಆಗ್ರಹಿಸಿದ್ದಾರೆ.