ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು -ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ…

ಪುತ್ತೂರು: ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮವನ್ನು ಪಾಲಿಸುವುದು ಕಡ್ಡಾಯವಾಗಿದೆ, ನಮ್ಮ ನಿಮ್ಮೆಲ್ಲರ ಒಳಿತಿಗಾಗಿ ಇರುವ ಈ ಕಾನೂನಿಗೆ ನಾವು ವಿಧೇಯರಾಗಿರಬೇಕು ಎಂದು ಪುತ್ತೂರಿನ ಟ್ರಾಫಿಕ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಮ ನಾಯ್ಕ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯೂತ್ ರೆಡ್‍ಕ್ರಾಸ್ ಘಟಕ ಹಾಗೂ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತಾಡಿದರು.
ಇತ್ತೀಚಿನ ದಿನಗಳಲ್ಲಿ 18 ವರ್ಷ ತುಂಬದವರು ವಾಹನಗಳನ್ನು ಚಲಾಯಿಸುವುದು ಹೆಚ್ಚಾಗಿದ್ದು, ಪೋಷಕರು ಇದರ ಬಗ್ಗೆ ಜಾಗರೂಕರಾಗಿರಬೇಕು. ಅಪಘಾತ ಸಂಭವಿಸಿದರೆ ಯಾವುದೇ ನೆರವು ಸಿಗಲಾರದು ಮತ್ತು ಹೆಚ್ಚಿನ ದಂಡವನ್ನು ಪಾವತಿಸಬೇಕಾಗುತ್ತದೆ ಎಂದರು.
ಇನ್ನೋರ್ವ ಮುಖ್ಯ ಅತಿಥಿ ಮಂಗಳೂರಿನ ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ನಾಯ್ಕ್ ಮಾಲಿನ್ಯ ನಿಯಂತ್ರಣದ ಬಗ್ಗೆ ಮಾತನಾಡಿ ನಾವೆಷ್ಟು ಅನಾಚಾರ ಮಾಡಿದರೂ ಪ್ರಕೃತಿಯು ಸಹಿಸಿಕೊಂಡಿದೆ. ಅದರಿಂದಾಗಿ ಇನ್ನಷ್ಟು ಹೆಚ್ಚು ದಬ್ಬಾಳಿಕೆ ಮಾಡುತ್ತಲೇ ಇದ್ದೇವೆ. ಪ್ರಕೃತಿ ಏನಾದರೂ ಮುನಿದರೆ ನಮ್ಮ ಅಸ್ತಿತ್ವವೇ ಕೊನೆಯಾಗುತ್ತದೆ ಎಂದರು. ಸಾರ್ವಜನಿಕರಲ್ಲಿ ಮಾಲಿನ್ಯ ನಿಯಂತ್ರಣದ ಅರಿವು ಮೂಡಿಸುವುದಕ್ಕಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಮಾಲಿನ್ಯ ನಿಯಂತ್ರಣಕ್ಕಾಗಿ ಇಲಾಖೆಗಳು ನಿಗದಿಪಡಿಸಿದ ಮಾನದಂಡಗಳನ್ನು ಪಾಲಿಸಬೇಕು. ನೆಲ, ಜಲ ಮತ್ತು ವಾಯು ಮಾಲಿನ್ಯವನ್ನು ತಡೆಗಟ್ಟುವುದಕ್ಕಾಗಿ ನಾವೆಲ್ಲರೂ ಕಂಕಣಬದ್ದರಾಗಬೇಕು ಎಂದು ನುಡಿದರು.
ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ಅಜಿಲ ಗೌರವ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಸ್ವಾಗತಿಸಿದರು. ಕಾಲೇಜಿನ ಐಎಸ್‍ಟಿಇ ಸಂಯೋಜಕ ಡಾ.ಮನುಜೇಶ್.ಬಿ.ಜೆ ಪ್ರಸ್ತಾವನೆಗೈದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜಕಿ ಪ್ರೊ.ನಿಶಾ.ಜಿ.ಆರ್ ವಂದಿಸಿದರು. ಭುವನೇಶ್ವರಿ ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕರಲ್ಲಿ ಹಾಗೂ ವಾಹನ ಚಾಲಕರಲ್ಲಿ ಮಾಲಿನ್ಯ ನಿಯಂತ್ರಣದ ಅರಿವು ಮೂಡಿಸುವುದಕ್ಕಾಗಿ ಪಡೀಲ್ ಮತ್ತು ಮುರದಲ್ಲಿ ಕರಪತ್ರಗಳನ್ನು, ಸ್ಟಿಕ್ಕರ್‍ಗಳನ್ನು ಹಂಚಲಾಯಿತು. ಪ್ರೊ.ಅಜಿತ್.ಕೆ ಮತ್ತು ಪ್ರೊ.ತಪಸ್ವಿನಿ ಅವರ ನೇತೃತ್ವದಲ್ಲಿ ಎನ್‍ಎಸ್‍ಎಸ್ ಸ್ವಯಂಸೇವಕರು ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Pollution Day4 300x169 Pollution Day2 300x169 Pollution Day1 300x155

Related Articles