ಅಂತರ್ ರಾಷ್ಟ್ರೀಯ ಕನ್ನಡಿಗಾಸ್ ಫೆಡರೇಶನ್ ಸಂಚಾಲಕ ಹಿದಾಯತ್ ಅಡ್ಡೂರು ಸುಳ್ಯ ಭೇಟಿ…

ಸುಳ್ಯ: ಅಂತರರಾಷ್ಟ್ರೀಯ ವಿಶ್ವ ಮಾನ್ಯ ಪ್ರಶಸ್ತಿ ಪುರಸ್ಕೃತ ಯುಎಇ ಯ ಹಿದಾಯತ್ ಅಡ್ಡೂರ್ ಖಾಸಗಿ ಕಾರ್ಯನಿಮಿತ್ತ ಸುಳ್ಯಕ್ಕೆ ಭೇಟಿ ನೀಡಿದರು.
ಅನಿವಾಸಿ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಲು ಮತ್ತು ಗಲ್ಫ್ ಕನ್ನಡಿಗರ ಸಮಸ್ಯೆಯ ಬಗ್ಗೆ ಸರಕಾರದ ಗಮನ ಸೆಳೆಯಲು ರೂಪುಗೊಂಡ ಅಂತರಾಷ್ಟ್ರೀಯ ಕನ್ನಡಿಗಾಸ್ ಹೆಲ್ಪ್ ಲೈನ್ ಮೂಲಕ ಕೋವಿಡ್ ಸಂದರ್ಭದಲ್ಲಿ ಕೊರೋನ ಯೋಧರಾಗಿ ಕಾರ್ಯ ನಿರ್ವಹಿಸಿತ್ತು. ದೇಶದ ಬೇರೆ ಬೇರೆ ರಾಜ್ಯಗಳಿಂದ ಗಲ್ಫ್ ರಾಷ್ಟ್ರ ಗಳಿಗೆ ಉದ್ಯೋಗ- ಪ್ರವಾಸಕ್ಕೆ ತೆರಳಿದವರು ನಿಧನಹೊಂದಿದ ಸಂದರ್ಭದಲ್ಲಿ ಅವರ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಇತ್ತೀಚೆಗೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿದ್ದ ಸುಳ್ಯದ ಕನಕಮಜಲು ನಿವಾಸಿ ಶಶಿಕಲಾ ಎಂಬವರು ದುಬೈ ಯಲ್ಲಿ ಸಂಕಷ್ಟದಲ್ಲಿದ್ದಾಗ ತಾಯ್ನಾಡಿಗೆ ಮರಳಲು ಇವರ ಹೆಲ್ಪ್ ಲೈನ್ ಯಶಸ್ವಿಯಾಗಿತ್ತು.
ಸುಳ್ಯಕ್ಕೆ ಆಗಮಿಸಿದ ಅಡ್ಡೂರು ರವರನ್ನು ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಿಸಲಾಯಿತು
ಈ ಸಂದರ್ಭದಲ್ಲಿ ದ. ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಕೆ ಎಂ ಮುಸ್ತಫಾ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿಎಂ ಶಹೀದ್, ಜನತಾ ಗ್ರೂಪ್ಸ್ ರಿಜ್ವಾನ್ ಅಹಮದ್, ಸಾಮಾಜಿಕ ಕಾರ್ಯಕರ್ತರುಗಳಾದ ಸಿದ್ದೀಕ್ ಕೊಕೊ, ಹನೀಫ್ ಕುಂಡಿಲ್ ಟ್ರಸ್ಟ್ ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್ಸ್ ಉಪಸ್ಥಿತರಿದ್ದರು.

Sponsors

Related Articles

Back to top button