ಯೆನೆಪೋಯ ಇಂಜಿನಿಯರಿಂಗ್ ಕಾಲೇಜು: ಯೆನ್ ಸಂಭ್ರಮ – 2022…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು “ಯೆನ್ ಸಂಭ್ರಮ – 2022 ” ಡಿ.24 ರಂದು ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಝೀ ಟಿವಿ ಡಾನ್ಸ್ ಇಂಡಿಯಾ ಡಾನ್ಸ್ ಲಿಟಲ್ ಮಾಸ್ಟರ್ ಸೀಸನ್ 3 ಖ್ಯಾತಿಯ ಕಲಾವಿದೆ, ತುಳುವಸಿರಿ ಅದ್ವಿಕಾ ಶೆಟ್ಟಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅದ್ವಿಕಾ ಶೆಟ್ಟಿ ಇಂತಹ ಸ್ಪರ್ಧಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಮತ್ತು ಕ್ರಿಯಾಶೀಲತೆಗೆ ವೇದಿಕೆಯಾಗುತ್ತದೆ. ವಿದ್ಯಾರ್ಥಿಗಳು ಅವಕಾಶಗಳನ್ನು ಕಳೆದುಕೊಳ್ಳದೆ ಸದುಪಯೋಗ ಪಡಿಸಿಕೊಳ್ಳಬೇಕು. ಆತ್ಮ ವಿಶ್ವಾಸದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ, ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಪ್ರೊ. ದೀಕ್ಷಾ ಕೆ. ಆರ್, ಎಲ್ಲಾ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಮೈಮೂನ ಅತಿಥಿಗಳ ಪರಿಚಯ ಮಾಡಿದರು.ಪಿ ಎನ್ ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಹಾಡುಗಾರಿಕೆ, ರಸಪ್ರಶ್ನೆ, ಮ್ಯಾಡ್ ಆಡ್ಸ್, ಗ್ರೂಪ್ ಡಾನ್ಸ್, ರಂಗೋಲಿ, ಪೆನ್ಸಿಲ್ ಸ್ಕೆಚ್, ಚರ್ಚಾ ಸ್ಪರ್ಧೆ, ಮೆಹಂದಿ, ಕೊಲಾಜ್, ಫೋಟೋಗ್ರಫಿ, ಫೇಸ್ ಪೇಂಟಿಂಗ್ ಮೊದಲಾದ 15 ಕ್ಕೂ ಅಧಿಕ ವಿಭಾಗಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.




