ವಿದ್ಯುನ್ಮಾನ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ- ಐವನ್ ಡಿಸೋಜಾ…..
ಮಂಗಳೂರು: ಕೋರ್ಟ್ ಕಲಾಪ ಕೂಡ ಲೈವ್ ಆಗಿ ನಡೆಯುತ್ತದೆ. ಆದರೆ ವಿಧಾನಸಭೆಯಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಇದು ಆರ್ ಎಸ್ ಎಸ್ ಮತ್ತು ಬಿಜೆಪಿ ಜಂಗಿಕುಸ್ತಿ. ರಾಜ್ಯದಲ್ಲಿ ಜನಪರ ಸರಕಾರ ಇಲ್ಲ. ಸರಕಾರಕ್ಕೆ ಆಡಳಿತ ಮುಂದುವರಿಸಲು ನೈತಿಕ ಹಕ್ಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನೆರೆ ಪರಿಹಾರ ವಿತರಿಸುವಲ್ಲಿ ರಾಜ್ಯ, ಕೇಂದ್ರ ವಿಫಲವಾಗಿದೆ. ಎನ್ ಡಿ ಆರ್ ಎಫ್ ಪ್ರಕಾರ 35 ಸಾವಿರ ಕೋಟಿ ನಷ್ಟವಾಗಿದೆ. ಆದರೆ ಕೇಂದ್ರ ಕೊಟ್ಟದ್ದು 1200 ಕೋಟಿ ರೂ. ಮಾತ್ರ. ರಾಜ್ಯ ಸರಕಾರ ತನ್ನ ಮೊಂಡುತನದಿಂದ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿಲ್ಲ. ಕೊಡಗು ಮಾದರಿಯಲ್ಲಿ ಪರಿಹಾರ ನೀಡಬೇಕು. ರೈತರಿಗೆ ಪರಿಹಾರ ನೀಡಲು, ನೆರೆಸಂತ್ರಸ್ತರ ಕಣ್ಣೀರು ಒರೆಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪ್ರಧಾನಿ ರಾಜ್ಯದ ಬಗ್ಗೆ ಗಮನಕೊಟ್ಟಿಲ್ಲ ಎಂದು ಟೀಕಿಸಿದರು.