ಸುರತ್ಕಲ್ – ಜಲೀಲ್ ಕಾಟಿಪಳ್ಳ ನಿವಾಸಕ್ಕೆ ದ. ಕ ಜಿಲ್ಲಾ ಕಾಂಗ್ರೆಸ್ ನಿಯೋಗ ಭೇಟಿ…

ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಜಲೀಲ್ ಕಾಟಿಪಳ್ಳ ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹ್ಮದ್ ರವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಜಲೀಲ್ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಲೀಂ ಅಹ್ಮದ್ ರವರು ಜಲೀಲ್ ಕಾಟಿಪಳ್ಳ ರವರ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ.ಇಂದು ಮೃತ ಜಲೀಲ್ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇವೆ.ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ.ಸರ್ಕಾರ ಕೂಡಲೇ ಮೃತರ ಕುಟುಂಬಕ್ಕೆ 25 ಲಕ್ಷ ಘೋಷಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಹಾಗೂ ಆರೋಪಿಗಳನ್ನು ಯುಎಪಿಎ ಪ್ರಕರಣ ದಾಖಲಿಸಿ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಸಲೀಂ ಅಹ್ಮದ್ ರವರು ಆಗ್ರಹಿಸಿದ್ದಾರೆ.
ನಿಯೋಗದಲ್ಲಿ ಮಾಜಿ ಕೇಂದ್ರ ಸಚಿವರಾದ ರೆಹಮಾನ್ ಖಾನ್, ಮಾಜಿ ಸಚಿವರಾದ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ಶಾಸಕರಾದ ಮೊಯ್ದಿನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ,ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ , ಕವಿತಾ ಸನಿಲ್, ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಮತ್ತಿತರರು ನಿಯೋಗದಲ್ಲಿದ್ದರು.


