ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಮನೆ ಕಾಮಗಾರಿ- ಟಿ.ಎಂ ಶಹೀದ್ ತೆಕ್ಕಿಲ್‌ರಿಂದ ವೀಕ್ಷಣೆ…

ಸುಳ್ಯ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪತಿಷ್ಠಾನ ಅರಂತೋಡು ಇದರ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರ 50ನೇ ಹುಟ್ಟು ಹಬ್ಬದ ವರ್ಷಾಚರಣೆ ಪ್ರಯುಕ್ತ ಸಂಪಾಜೆ ಗ್ರಾಮದ ಗೂನಡ್ಕ ದರ್ಖಾಸ್ತು ಬಡ ಮಹಿಳೆಗೆ ಸುಮಾರು ರೂ.6ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮನೆಯ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಇದರ ವೀಕ್ಷಣೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಅಬೂಸಾಲಿ ಗೂನಡ್ಕ , ಪೇರಡ್ಕ ಮೋಹಿಯುದ್ದಿನ್ ಜುಮಾ ಮಸೀದಿಯ ಕಾರ್ಯದರ್ಶಿ ಅಬ್ದುಲ್ ರಜಾಕ್ ತೆಕ್ಕಿಲ್, ಟಿ.ಬಿ ಮಹಮ್ಮದ್ ತುರ್ತಿ ಗೂನಡ್ಕ, ಲತೀಫ್ ತೆಕ್ಕಿಲ್, ಇಬ್ರಾಹಿಂ ಚೆರೂರು ಗೂನಡ್ಕ ಉಪಸ್ಥಿತರಿದ್ದರು. ಶೀಘ್ರದಲ್ಲಿ ಮನೆಯನ್ನು ಹಸ್ತಾಂತರಿಸಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ ತಿಳಿಸಿರುತ್ತಾರೆ.

whatsapp image 2022 12 31 at 12.33.36 pm

Related Articles

Back to top button