ಯಾತ್ರಿಭವನದ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಲು ಇಲಾಖಾ ಅಧಿಕಾರಿಗಳಿಗೆ ಟಿ.ಎಂ ಶಹೀದ್ ತೆಕ್ಕಿಲ್ ಸೂಚನೆ…
ಸುಳ್ಯ: ಕರ್ನಾಟಕ ಸರಕಾರದ ಪ್ರವಾಸೋಧ್ಯಮ ಇಲಾಖೆ ವತಿಯಿಂದ ಪೇರಡ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ 59 ಲಕ್ಷದ ಯಾತ್ರಿ ಭವನದ ಕಟ್ಟಡ ಕಾಮಗಾರಿಯನ್ನು ಒಂದು ತಿಂಗಳ ಒಳಗೆ ಪೂರ್ಣಗೊಳಿಸಿ ಕೊಡಬೇಕೆಂದು ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಕರ್ನಾಟಕ ರೂರಲ್ ಇನ್ಫ್ರಾಸ್ಟ್ರೆಕ್ಚರ್ ಎಕ್ಸ್ಯುಕ್ಯೂಟಿವ್ ಇಂಜಿನಿಯರ್ರಾದ ದಿನೇಶ್ ಮತ್ತು ಗುತ್ತಿಗೆದಾರ ಇಬ್ರಾಹಿಂ ಅಡ್ಕಾರ್ ರವರಿಗೆ ಪೇರಡ್ಕ ಮುಹಿದ್ದೀನ್ ಜುಮಾ ಮಸೀದಿಯ ಗೌರವ ಅಧ್ಯಕ್ಷರು ಹಾಗೂ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರು ನಿರ್ದೇಶನ ನೀಡಿದರು.
ಫೆಬ್ರವರಿ ತಿಂಗಳಲ್ಲಿ ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫಿನ ಉರೂಸ್ ಕಾರ್ಯಕ್ರಮ ನಡೆಯಲಿರುವುದರಿಂದ ತಕ್ಷಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಕಳೆದ ಐದು ವರ್ಷಗಳಿಂದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಅವರು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಜೂನಿಯರ್ ಇಂಜಿನಿಯರ್ ಕು| ಸಚಿತ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಅಲ್ಪಸಂಖ್ಯಾತರ ಘಟಕ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಅಬೂಸಾಲಿ ಗೂನಡ್ಕ, ಮಸೀದಿ ಕಾರ್ಯದರ್ಶಿ ಅಬ್ದುಲ್ ರಜಾಕ್ ತೆಕ್ಕಿಲ್, ಪಿ.ಎ ಮಹಮ್ಮದ್ ಕುಂಇ’ ತೆಕ್ಕಿಲ್, ಅಬ್ದುಲ್ ಲತೀಫ್ ತೆಕ್ಕಿಲ್ ಮೊದಲಾದವರು ಉಪಸ್ಥಿತರಿದ್ದರು.