ಹುಟ್ಟೂರಲ್ಲಿ ಕದ್ರಿ ಗೋಪಾಲನಾಥ್ ಅಂತ್ಯಕ್ರಿಯೆ….

ಬಂಟ್ವಾಳ: ಖ್ಯಾತ ಸ್ಯಾಕ್ಸೊಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಸಜೀಪದ ಮಿತ್ತಮಜಲಿನ ಮಿತ್ತಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅ.14 ರ ಸಂಜೆ ನಡೆಯಿತು.
ಅಪರಾಹ್ನ ಸುಮಾರು 3 ಗಂಟೆಗೆ ಗೋಪಾಲನಾಥ್ ರವರ ಪಾರ್ಥಿವ ಶರೀರ ಸಜಿಪಮೂಡ ಗ್ರಾಮಕ್ಕೆ ತಲುಪಿತು. ನಂತರ ಸ್ವಲ್ಪ ಹೊತ್ತು ಇಲ್ಲಿನ ಮಿತ್ತಕೆರೆಯ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಬಳಿಕ ಪೊಲೀಸ್ ತಂಡ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ಪಾರ್ಥಿವ ಶರೀರಕ್ಕೆ ಗೌರವ ವಂದನೆ ಸಲ್ಲಿಸಿ, ಅಂತ್ಯಕ್ರಿಯೆ ನೆರವೇರಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಮಮತಾಗಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ ಮೊದಲಾದವರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

Sponsors

Related Articles

Leave a Reply

Your email address will not be published. Required fields are marked *

Back to top button