ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಂ. ಮುಸ್ತಫ ಸುಳ್ಯ ನೇಮಕ…

ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಕೆ. ಎಂ. ಮುಸ್ತಫ ಇವರನ್ನು ನೇಮಕಗೊಳಿಸಿ ಕೆ.ಪಿ.ಸಿ.ಸಿ .ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಮಾನ್ಯ ಅಬ್ದುಲ್ ಜಬ್ಬಾರ್ ರವರು ಪಕ್ಷದ ರಾಷ್ಟ್ರೀಯ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರು, ಸಂಸದರಾದ ಇಮ್ರಾನ್ ಪ್ರತಾಪ್ ಗಡಿ ಅವರ ಅನುಮೋದನೆ ಯೊಂದಿಗೆ ನೇಮಕ ಮಾಡಿರುತ್ತಾರೆ.ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಕೆ.ಕೆ. ಶಾಹುಲ್ ಹಮೀದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ನೇಮಕಾತಿಗೆ ವಿಧಾನಸಭೆಯ ವಿಪಕ್ಷ ಶಾಸಕಾಂಗ ಉಪನಾಯಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಆದ ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿಧಾನ ಪರಿಷತ್ತಿನ ಮಾಜಿ ಮುಖ್ಯ ಸಚೇತಕರಾದ ಐವನ್ ಡಿ’ಸೋಜ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ್ ಶಿಫಾರಸು ಮಾಡಿರುತ್ತಾರೆ.
ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯರು ಆಗಿರುವ ಮುಸ್ತಫ ಸುಳ್ಯ ಇವರು ಜಿಲ್ಲಾ ಯೋಜನಾ ಸಮಿತಿಯ ಮಾಜಿ ಸದಸ್ಯರಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರಾಗಿ, ಸುಳ್ಯದ ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ, ಸುಳ್ಯ ಅನ್ಸಾರಿ ಎಜುಕೇಶನ್ ಸೆಂಟರ್ ನ ಸಲಹೆಗಾರರಾಗಿ,ಸುಳ್ಯ ತಾಲೂಕಿನ ಮಸೀದಿಗಳ ಜಮಾತ್ ಸಮಿತಿಗಳ ಅಧ್ಯಕ್ಷರು ಕಾರ್ಯದರ್ಶಿಗಳ ಸಮನ್ವಯ ಸಮಿತಿಯ ಸಂಚಾಲಕರಾಗಿ ಹಾಗೂ ಹಲವಾರು ಧಾರ್ಮಿಕ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

