ಸಜೀಪ ಮೂಡ ಸರಕಾರಿ ಪದವಿ ಪೂರ್ವ ಕಾಲೇಜು – ಗಣರಾಜ್ಯೋತ್ಸವ…

ಬಂಟ್ವಾಳ: ಸಜೀಪ ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ 74ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ ನೆರವೇರಿಸಿದರು.
ಗಣರಾಜ್ಯೋತ್ಸವದ ಮಹತ್ವವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ ಸುಬ್ರಹ್ಮಣ್ಯ ಭಟ್ ವಿವರಿಸಿದರು. ಕಾಲೇಜು ಪ್ರಾಂಶುಪಾಲ ಬಾಬು ಗಾoವ್ಕರ್ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮೈಗೂಡಿಸುವ ಬಗ್ಗೆ ಕರೆ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವಿಶ್ವನಾಥ್ ಕೊಟ್ಟಾರಿ, ಪ್ರಾಧ್ಯಾಪಕ ಸುರೇಶ್ ಐತಾಳ್ ಉಪಸ್ಥಿತರಿದ್ದರು. ಉಪನ್ಯಾಸಕಿ ಭಾರತಿ ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಉಪನ್ಯಾಸಕಿ ಸುಂದರಿ ಸ್ವಾಗತಿಸಿದರು. ಉಪನ್ಯಾಸಕಿ ಶೋಭಾ ವಂದಿಸಿದರು.