ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ನೂತನ ಗರ್ಭ ಗುಡಿಯ ಶಿಲಾನ್ಯಾಸ…

ಮೂಡುಬಿದ್ರಿ: ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ನೂತನ ಗರ್ಭ ಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಉಡುಪಿ ಮಠದ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತದಲ್ಲಿ ನೆರವೇರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಅವರು ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಭಯ ಚಂದ್ರ ಜೈನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಹೊಸಂಗಡಿ ಅರಮನೆಯ ಸುಕುಮಾರ್ ಶೆಟ್ಟಿ, ಧನಲಕ್ಷ್ಮಿ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಶ್ರೀಪತಿ ಭಟ್, ಪುರಸಭಾ ಸದಸ್ಯರಾದ ಸುರೇಶ್ ಪ್ರಭು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಅನಂತ ಕೃಷ್ಣರಾವ್, ಕಾರ್ಯದರ್ಶಿ ರವಿ ಪ್ರಸಾದ್ ಕೆ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ವ್ಯವಸ್ಥಾಪನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

